ಪರಿಷ್ಕೃತ ದರದಲ್ಲಿ ವೇತನ ನೀಡಲು ಆಗ್ರಹ

ಸಂಪುಟ: 
10
ಸಂಚಿಕೆ: 
07
Sunday, 7 February 2016

2015 ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಪರಿಷ್ಕರಿಸಿರುವ ನೂತನ ವೇತನ ದರಗಳಲ್ಲಿ ಎಸ್.ಸಿ. ಎಸ್.ಟಿ., ಹಿಂದುಳಿದ ವರ್ಗಗಳ ಹಾಗೂ ಮೊರಾರ್ಜಿದೇಸಾಯಿ, ರಾಣಿಚೆನ್ನಮ್ಮ ಹಾಗೂ ಆಶ್ರಮ ವಸತಿ ಶಾಲೆಗಳ ಹೊರಗುತ್ತಿಗೆ ನೌಕರರಿಗೆ ವೇತನ ಸಂದಾಯ ಮಾಡಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಸಂಘದ ರಾಜ್ಯ ಅಧ್ಯಕ್ಷರಾದ ನಿತ್ಯಾನಂದಸ್ವಾಮಿರವರು ಒತ್ತಾಯಿಸಿದರು.

ಕಳೆದ ಐದಾರು ತಿಂಗಳುಗಳಿಂದ ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಮಾಸಿಕ ವೇತನ ಸಂದಾಯ ಮಾಡದೆ ಸತಾಯಿಸುತ್ತಿರುವುದನ್ನು ಖಂಡಿಸಿದರು. ಅವರು ಗುತ್ತಿಗೆದಾರರು ಮತ್ತು ಸ್ಥಳೀಯ ಅಧಿಕಾರಿಗಳು ಶಾಮೀಲಾಗಿ ನೌಕರರಿಗೆ ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಟೀಕಿಸಿದರು. ಬಳ್ಳಾರಿಯಲ್ಲಿ ಹಾಸ್ಟೆಲ್ ಹೊರಗುತ್ತಿಗೆ ನೌಕರರ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.