ಅತಿಥಿ ಉಪನ್ಯಾಸಕರಿಂದ ಮುಖ್ಯಮಂತ್ರಿ ಮನೆ ಎದುರು ಧರಣಿ

Wednesday, 29 June 2016

ಬೆಂಗಳೂರು, ಜೂನ್ 29: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ 14,531 ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆಯನ್ನು ಒದಗಿಸಬೇಕೆಂದು ಹಲವಾರು ಬಾರಿ ಹೋರಾಟ ಮಾಡಲಾಗಿದೆ. ಮೇ 20ರಂದು ಅಂದಿನ ಮಾನ್ಯ ಉನ್ನತ ಶಿಕ್ಷಣ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ರವರ ನಿವಾಸದೆದುರು ಪ್ರತಿಭಟನೆ ಮಾಡಲಾಗಿತ್ತು.

ಅಂದು ಸಂಘದ ಪದಾಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದ ಉನ್ನತ ಶಿಕ್ಷಣ ಸಚಿವರು ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಮುಷ್ಕರ ಅವಧಿಯ ವೇತನ, ಪ್ರಸಕ್ತ 2016-17ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಮುಂದುವರೆಸಲಾಗುವುದೆಂದು ಅಧಿಕೃತವಾಗಿ, ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೆ ನಿದೇರ್ಶಿಸಿದರಲ್ಲದೆ ಅಧಿಕೃತ ಅದೇಶವನ್ನು ಹೊರಡಿಸಲಾಗುವುದು ಎಂದು ಹೇಳಿದ್ದರು. ಆದರೆ ಇಲ್ಲಿಯವರೆಗೂ ಉನ್ನತ ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರನ್ನು ಮುಂದುವರೆಸುವ ಸ್ಪಷ್ಟ ಆದೇಶ ಹೊರಬಿದ್ದಿಲ್ಲ.

ಬೆಂಗಳೂರು ವಿ.ವಿ ಸೇರಿದಂತೆ ಶಿವಮೊಗ್ಗ ವಿವಿ, ಮಂಗಳೂರು ವಿವಿಗಳು ಇದೇ ತಿಂಗಳು 27 ರಿಂದ ಪ್ರಾರಂಭವಾಗಿರುತ್ತವೆ. ಆದರೆ ಉನ್ನತ ಶಿಕ್ಷಣ ಇಲಾಖೆ ಇದುವರೆಗೂ ಅತಿಥಿ ಉಪನ್ಯಾಸಕರನ್ನು ಮುಂದುವರಿಸುವ ಆದೇಶ ನೀಡಿಲ್ಲ. ಆದ್ಧರಿಂದ ಅತಿಥಿ ಉಪನ್ಯಾಸಕರನ್ನು ಕೂಡಲೇ ಮುಂದುವರೆಸುವ ಆದೇಶವನ್ನು ಕಾಲೇಜುಗಳಿಗೆ ಉನ್ನತ ಶಿಕ್ಷಣ ಇಲಾಖೆ ಶೀಘ್ರ ಸುತ್ತೋಲೆಯನ್ನು ಹೊಡರಿಸಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿಯವರ ನಿವೇಶನದ ಎದುರು ಕರ್ನಾಟಕ ರಾಜ್ಯ ಸರಕಾರಿ ಪ್ರಥಮದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಸಮಿತಿ ಹಾಗೂ ಡಿವೈಎಫ್‍ಐ ಸಂಘಟನೆ ಮೂಲಕ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದ್ದಾರೆ.