ಪ್ರಾಂಶುಪಾಲರ ಮೇಲಿನ ಹಲ್ಲೆಗೆ ಖಂಡನೆ

ಸಂಪುಟ: 
10
ಸಂಚಿಕೆ: 
46
Monday, 24 October 2016

ಮಂಗಳೂರು ನಗರದ ಮಿಲಾಗ್ರೆಸ್ ಕಾಲೇಜಿನ ಪ್ರಾಂಶುಪಾಲರಾದ ವಂ.ಮೈಕಲ್ ಸಾಂತುಮಾಯೋರ್ ರವರ ಮೇಲೆ ವಿದ್ಯಾರ್ಥಿಯೊಬ್ಬ ದೈಹಿಕ್ಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ ವತಿಯಿಂದ ಪ್ರತಿಭಟನಾ ಧರಣಿಯನ್ನು ಅಕ್ಟೋಬರ್ 24ರಂದು ನಡೆಸಲಾಯಿತು.

ಘಟನೆಯನ್ನು ಖಂಡಿಸಿ ತಪ್ಪಿತಸ್ಥನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಲಾಯಿತು. ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ಬಜಾಲ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿದರು.