ಹಾಸ್ಟೆಲ್ ಸಮಸ್ಯೆ ಬಗೆಹರಿಸಬೇಕೆಂದು ರಸ್ತೆ ತಡೆ

ಸಂಪುಟ: 
10
ಸಂಚಿಕೆ: 
46
Thursday, 3 November 2016

ಬಳ್ಳಾರಿ ಜಿಲ್ಲೆಯಲ್ಲಿರುವ ಹಾಸ್ಟೆಲ್ ಶಾಲಾ ಕಾಲೇಜು, ವಿಶ್ವವಿದ್ಯಾಲಯಗಳ ಅಭಿವೃದ್ಧಿಗಾಗಿ ಆಗ್ರಹಿಸಿ ಎಸ್‍ಎಫ್‍ಐ ನೇತೃತ್ವದಲ್ಲಿ ನವೆಂಬರ್ 03ರಂದು ಹೊಸಪೇಟೆಯ ಹಂಪಿ ರಸ್ತೆಯನ್ನು ಎರಡು ಗಂಟೆಗಳ ಕಾಲ ತಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಹಂಪಿ ಉತ್ಸವವನ್ನು ಕೋಟ್ಯಾಂತರ ಹಣ ಖರ್ಚು ಮಾಡಿ ಕಾರ್ಯಕ್ರಮ ನಡೆಸುವ ಸರ್ಕಾರವು ಹಾಸ್ಟೆಲ್ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಮುಂದಾಗಲಿಲ್ಲ ಎಂದು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ವಿಜಯ ಡಂಬಳರವರು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಪ್ರತಿಭಟನೆಗೂ ಹಿಂದಿನ ದಿನ ನವೆಂಬರ್ 02ರಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್‍ರವರ ಸಮ್ಮುಖದಲ್ಲಿ ಸಭೆ ನಡೆದರೂ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರವು ಸೂಕ್ತ ತೀರ್ಮಾನ ಕೈಗೊಂಡಿಲ್ಲ.