ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸಬೇಕೆಂದು ಸರ್ಕಾರಕ್ಕೆ ಮನವಿ

ಸಂಪುಟ: 
10
ಸಂಚಿಕೆ: 
47
Tuesday, 8 November 2016

ಖಾಸಗಿ ಆಸ್ಪತ್ರೆಗಳು, ವೈದ್ಯರು ರೋಗಿಗಳಿಗೆ ದುಬಾರಿ ಶುಲ್ಕ ವಿಧಿಸುತ್ತಿದ್ದಾರೆ. ಅನಗತ್ಯ ಪರೀಕ್ಷೆ, ಚಿಕಿತ್ಸೆಗಳನ್ನು ನಡೆಸುತ್ತಾರೆ. ಖಾಸಗಿ ಆಸ್ಪತ್ರೆಗಳು ಯಾವುದೇ ನಿಯಮಗಳನ್ನು ಪಾಲಿಸುತ್ತಿಲ್ಲ. ದರ ನಿಗದಿಗೆ ಸಂಬಂಧಿಸಿ ಯಾವುದೇ ಮಾನದಂಡವನ್ನು ವೈದ್ಯರಾಗಲಿ, ಆಸ್ಪತ್ರೆಗಳ ಆಡಳಿತವಾಗಲಿ ಪಾಲಿಸುತ್ತಿಲ್ಲ.

ಅದಲ್ಲದೇ ಸರಕಾರಿ ಆರೋಗ್ಯ ಸೇವೆ ಜಿಲ್ಲೆಯಲ್ಲಿ ಸಂಪೂರ್ಣ ಹದಗೆಟ್ಟಿದೆ. ಜಿಲ್ಲೆಯಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಇರಬೇಕಾದ ಪ್ರಾಥಮಿಕ ಆರೋಗ್ಯಕೇಂದ್ರ, ಸಮುದಾಯ ಆಸ್ಪತ್ರೆಗಳು ಸರಾಸರಿಗಿಂತ ತೀರಾ ಕೆಳಮಟ್ಟದಲ್ಲಿದೆ. ತಾಲೂಕು, ಜಿಲ್ಲಾ ಆಸ್ಪತ್ರೆಗಳಿಗೆ ಜನ ಚಿಕಿತ್ಸೆಗೆ ತೆರಳಲು ಭಯಪಡುವಂತಾಗಿದೆ. ಐದಾರು ಜಿಲ್ಲೆಗಳ ಜನಸಾಮಾನ್ಯರ ಪಾಲಿಗೆ ಏಕೈಕ ದೊಡ್ಡಾಸ್ಪತ್ರೆ ವೆನ್ಲಾಕ್ ತುರ್ತು ಚಿಕಿತ್ಸಾ ಘಟಕ ಸಹಿತ ಮೂಲಭೂತ ಸೌಲಭ್ಯಗಳಿಲ್ಲದೆ ಬಡರೋಗಿಗಳ ಪಾಲಿಗೆ ನರಕದಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ವೆನ್ಲಾಕ್, ಲೇಡಿಗೋಷನ್ ಆಸ್ಪತ್ರೆಗಳನ್ನು ಬಳಸಿ ಸರಕಾರಿ ಮೆಡಿಕಲ್ ಕಾಲೇಜು ತೆರೆಯಲು ಎಲ್ಲಾ ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಸರಕಾರ ಖಾಸಗಿ ಮೆಡಿಕಲ್ ಕಾಲೇಜು ತೆರೆಯಲು ನಿರಾಸಕ್ತಿವಹಿಸಿದೆ. ಈ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಡಿವೈಎಫ್‍ಐ ಜಿಲ್ಲಾ ಸಮಿತಿಯು ನವೆಂಬರ್ 08ರಂದು ಮನವಿ ಸಲ್ಲಿಸಿತು.

 

ವರದಿ : ಸಂತೋಷ್ ಬಜಾಲ್