ಕಡೆಗಣಿಸುತ್ತಿರುವ ಸರ್ಕಾರ: ಆಶಾ ಕಾರ್ಯಕರ್ತರ ಪ್ರತಿಭಟನೆ

ಸಂಪುಟ: 
11
ಸಂಚಿಕೆ: 
01
Sunday, 25 December 2016

ಮಾಸಿಕ ವೇತನ ಹಾಗೂ 45ನೇ ಭಾರತೀಯ ಕಾರ್ಮಿಕ ಸಮ್ಮೇಳನದ ಶಿಫಾರಸ್ಸಿನಂತೆ ಕಾರ್ಮಿಕರಂತೆ ಪರಿಗಣಿಸಬೇಕೆಂದು ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ರಾಜ್ಯದ ವಿವಿದೆಡೆ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಿದರು. ಜನತೆಗೆ ಪೌಷ್ಟಿಕ ಆಹಾರ ಹಾಗೂ ಶಿಕ್ಷಣ ಎಷ್ಟು ಮುಖ್ಯವೋ ಆರೋಗ್ಯವು ಕೂಡಾ ಅಷ್ಟೇ ಮುಖ್ಯವಾದುದು. ಸರ್ಕಾರದ ಲೋಪದೋಷಗಳನ್ನು ಮುಚ್ಚಿ ಹಾಕುವಂತಹ ಯೋಜನೆ ಎನ್.ಆರ್.ಎಚ್.ಎಮ್.ಯಾಗಿದೆ. ಈ ಯೋಜನೆ ಪ್ರಾರಂಭವಾಗಿ ಇನ್ನೂ 7 ವರ್ಷ ವಾಗುವಷ್ಟರಲ್ಲಿಯೇ 2015-16 ರಲ್ಲಿ ಅನುದಾನ ಕಡಿತಗೊಂಡಿದೆ. ಇದನ್ನು ಖಂಡಿಸಿ ಡಿಸೆಂಬರ್ 19ರಂದು ಪ್ರತಿಭಟನೆಯ ಸಂದರ್ಭದಲ್ಲಿ ಆಗ್ರಹಿಸಿದರು.

ಆಶಾ ಕಾರ್ಯಕರ್ತರನ್ನು ಆಯ್ಕೆ ಮಾಡುವಾಗ ವಿದ್ಯಾರ್ಹತೆ ಆಧಾರದಲ್ಲಿ ಅರ್ಹತೆಯುಳ್ಳವರಿಗೆ ಆಯ್ಕೆ ಮಾಡಬೇಕು. ರೂ.5000 ಕನಿಷ್ಠ ವೇತನ ನೀಡಬೇಕು ಮತ್ತು ಇನ್ನಿತರೆ ಮೂಲಭೂತ ಸೌಲಭ್ಯಗಳನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು. ಆಶಾ ಕಾರ್ಯಕರ್ತರು ಹೋರಾಟ ಮಾಡಿದಾಗ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಈಗಾಗಲೇ 2 ಭಾರಿ ಸಭೆಗಳಲ್ಲಿ ಬೇಡಿಕೆಗಳ ಬಗ್ಗೆ ಚರ್ಚಿಸಿ ಬಗೆಹರಿಸುವುದಾಗಿ ತಿಳಿಸಿದ್ದಾರೆ. ಆದರೆ ಅವು ಯಾವುವೂ ಲಿಖಿತ ರೂಪದ ಆದೇಶಗಳಾಗಿ ಬಂದಿಲ್ಲ ಎಂದು ಇದೇ ಸಂದರ್ಭದಲ್ಲಿ ಸರ್ಕಾರವನ್ನು ಎಚ್ಚರಿಸಿದರು.ಸಿಐಟಿಯು ಸಂಯೋಜನೆಗೊಂಡಿರುವ `ಅಖಿಲ ಭಾರತ ಆಶಾ ಕಾರ್ಯಕರ್ತೆಯರ ಸಮನ್ವಯ ಸಮಿತಿ'ಯು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಿದರು. ಬೇಡಿಕೆಗಳು ಈಡೇರದಿದ್ದಲ್ಲಿ ಜನವರಿಯಲ್ಲಿ ರಾಜ್ಯ ಮಟ್ಟದಲ್ಲಿ ಹಾಗೂ ಮಾರ್ಚ್‍ನಲ್ಲಿ ಪಾರ್ಲಿಮೆಂಟ್ ಚಲೋ ನಡೆಸುವ ಮೂಲಕ ಸರ್ಕಾರವನ್ನು ಎಚ್ಚರಿಸುವುದಾಗಿ ಕರೆ ನೀಡಿದರು.
 

ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ ಮತ್ತು ದೊಡ್ಡಬಳ್ಳಾಪುರದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆದಿದೆ. ತುಮಕೂರು ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಆಶಾ ಕಾರ್ಯಕರ್ತೆಯಾದ ವಿಜಯಲಕ್ಷ್ಮಿಯವರ ಮೇಲೆ ಎ.ಎನ್.ಎಮ್ ಕುಮ್ಮಕ್ಕಿನಿಂದ ಹಲ್ಲೆ ನಡೆದಿರುತ್ತದೆ. ಇವರಿಗೆ ನ್ಯಾಯ ಒದಗಿಸಬೇಕು ಅಧಿಕಾರಿಗಳ ಸಮ್ಮುಖದಲ್ಲಿ ಪ್ರತಿಭಟನಾಕಾರರು ಆಗ್ರಹಿಸಿದ ಸಂದರ್ಭದಲ್ಲಿ ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಲು ಆಗ್ರಹಿಸಿದ್ದರಿಂದ ಈ ವಿವಾದ ಇತ್ಯರ್ಥವಾಯಿತು.