Error message

  • Deprecated function: Methods with the same name as their class will not be constructors in a future version of PHP; views_display has a deprecated constructor in require_once() (line 3097 of /home/janashakthi/public_html/includes/bootstrap.inc).
  • Deprecated function: Methods with the same name as their class will not be constructors in a future version of PHP; views_many_to_one_helper has a deprecated constructor in require_once() (line 113 of /home/janashakthi/public_html/sites/all/modules/ctools/ctools.module).

ಕಾವೇರಿ : 2,000 ಕ್ಯುಸೆಕ್ ನೀರು ಬಿಡಲು ಸುಪ್ರೀಂ ಆದೇಶ

ಸಂಪುಟ: 
11
ಸಂಚಿಕೆ: 
14
date: 
Sunday, 26 March 2017

ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2,000 ಕ್ಯುಸೆಕ್ ನೀರು ಹರಿಸುವಂತೆ ಕಳೆದ ಜ.4ರಂದು ನೀಡಿರುವ ಆದೇಶವನ್ನು ಮುಂದುವರಿಸುವಂತೆ ಸುಪ್ರೀ ಕೋರ್ಟು ಸೂಚಿಸಿತು. ಮಾರ್ಚ್ 21 ರಂದು ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ, ಈ ಆದೇಶ ನೀಡಿದೆ.

``ಕರ್ನಾಟಕ ಕಾವೇರಿ ಕಣಿವೆ ವ್ಯಾಪ್ತಿಯಲ್ಲಿ ಏತ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಅವುಗಳಿಗೂ ತಡೆ ನೀಡಬೇಕು. ಕರ್ನಾಟಕವು ನಿತ್ಯ 2,000 ಕ್ಯುಸೆಕ್ ನೀರು ಬಿಡುವಂತೆ ಕೋರ್ಟ್ ನೀಡಿರುವ ಆದೇಶ ಪಾಲಿಸಿಲ್ಲ. ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಏಪ್ರಿಲ್ ಮಧ್ಯಭಾಗದಲ್ಲಿ ನೀರು ಹರಿಸುವಂತೆ ಸೂಚಿಸಬೇಕು'' ಎಂದು ತಮಿಳುನಾಡು ಪರ ವಕೀಲ ಶೇಖರ್ ನಾಫಡೆ ಕೋಟ್ರ್ಗೆ ಮನವಿ ಮಾಡಿದರು.

``ಕೋರ್ಟ್ ಆದೇಶವನ್ನು ಕರ್ನಾಟಕ ಪಾಲಿಸಿದೆ. ತೀವ್ರ ಬರ ಆವರಿಸಿದೆ. ಕುಡಿಯಲು ನಮಗೇ ನೀರಿಲ್ಲ. ಹೀಗಿರುವಾಗ ತಮಿಳುನಾಡಿಗೆ ನೀರು ಹರಿಸುವುದು ಅಸಾಧ್ಯ'' ಎಂದು ಕರ್ನಾಟಕ ಪರ ವಕೀಲ ಫಾಲಿ ನಾರಿಮನ್ ವಿವರಿಸಿದರು.

ಕಾವೇರಿ ಜಲವಿವಾದ ನ್ಯಾಯಮಂಡಳಿ ನೀಡಿರುವ ಐತೀರ್ಪನ್ನು ಪ್ರಶ್ನಿಸಿ ಕಣಿವೆ ವ್ಯಾಪ್ತಿಯ ರಾಜ್ಯಗಳು ಸಲ್ಲಿಸಿರುವ ಸಿವಿಲ್ ಅರ್ಜಿಗಳ ಅಂತಿಮ ವಿಚಾರಣೆಯನ್ನು ಜುಲೈ 11 ರಿಂದ ಆರಂಭಿಸಲು ಸಹ ಸುಪ್ರೀಂ ಕೋರ್ಟ್ ನಿರ್ಧರಿಸಿದೆ.