Error message

  • Deprecated function: Methods with the same name as their class will not be constructors in a future version of PHP; views_display has a deprecated constructor in require_once() (line 3097 of /home/janashakthi/public_html/includes/bootstrap.inc).
  • Deprecated function: Methods with the same name as their class will not be constructors in a future version of PHP; views_many_to_one_helper has a deprecated constructor in require_once() (line 113 of /home/janashakthi/public_html/sites/all/modules/ctools/ctools.module).

ಸಾಲಿಗ್ರಾಮ ಪಟ್ಟಣ ಪಂಚಾಯತ್‍ಗೆ ನಿವೇಶನ ರಹಿತರ ಮುತ್ತಿಗೆ

ಸಂಪುಟ: 
11
ಸಂಚಿಕೆ: 
44
date: 
Sunday, 22 October 2017

       
ಉಡುಪಿ ತಾಲೂಕು ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮನೆ, ನಿವೇಶನ ರಹಿತರ ಭೂಮಿ ಹಕ್ಕಿಗಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಪಟ್ಟಣ ಪಂಚಾಯತ್ ಕಛೇರಿ ಮುತ್ತಿಗೆ ಹೋರಾಟ ಕಾರ್ಯಕ್ರಮವು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ತಾಲೂಕು ಸಮಿತಿ ನೇತೃತ್ವದಲ್ಲಿ ಯಶಸ್ವಿಯಾಗಿ ಜರಗಿತು.

ಪ್ರತಿಭಟನಾ ಮೆರವಣಿಗೆ ಪೂರ್ವ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ನಾಲ್ಕು ಗ್ರಾಮಗಳ ಬಡನಿವೇಶನ ರಹಿತರ ಸಮಾವೇಶವು ಸಾಲಿಗ್ರಾಮ ಗಣೇಶ ಕೃಪ ಕಲ್ಯಾಣ ಮಂಟಪದಲ್ಲಿ ಜರಗಿತು. ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಉಡುಪಿ ಜಿಲ್ಲಾಧ್ಯಕ್ಷ ಯು. ದಾಸಭಂಡಾರಿ ನಿವೇಶನ ರಹಿತರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಾ, ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ನಿವೇಶನ ರಹಿತರಿಂದ ನಿವೇಶನ ಕೋರಿಕೆ ಅರ್ಜಿ ಸ್ವೀಕರಿಸಿ ಪಟ್ಟಣ ಪಂಚಾಯತ್‍ಗೆ ಹಸ್ತಾಂತರಿಸಿ ವರ್ಷ ಕಳೆದರೂ ನಿವೇಶನ ರಹಿತರ ಅರ್ಹ ಫಲಾನುಭವಿಗಳ ಪಟ್ಟಿ ಅಂತಿಮ ಗೊಳಿಸದಿರುವ ಮುಖ್ಯಾಧಿಕಾರಿಗಳ ಅಸಡ್ಡೆಯನ್ನು ತೀವ್ರವಾಗಿ ಖಂಡಿಸಿದರು.

ಸಾಲಿಗ್ರಾಮ ಪಟ್ಟಣ ಪಂಚಾಯತ್ ಕಛೇರಿ ಮುತ್ತಿಗೆ ಹೋರಾಟದ ಸಂದರ್ಭದಲ್ಲಿ ಜರಗಿದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಮಾತನಾಡುತ್ತಾ, ವಸತಿ ಸಮಿತಿಯ ಮೂಲಕ ನಿವೇಶನ ರಹಿತರ ಅರ್ಜಿಗಳನ್ನು ತನಿಖೆ ನಡೆಸಿ ಮುಂದಿನ ಮೂರು ತಿಂಗಳೊಳಗೆ ಅರ್ಹ ಫಲಾನುಭವಿಗಳ ನಿವೇಶನ ರಹಿತರ ಅಂತಿಮ ಪಟ್ಟಿ ಸಿದ್ಧಪಡಿಸದಿದ್ದರೆ  ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಂತರ ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳಿಗೆ, ಬೇಡಿಕೆಗಳ ಮನವಿ ಪತ್ರ ಹಸ್ತಾಂತರಿಸಲಾಯಿತು. ಮುಂದಿನ ಮೂರು ತಿಂಗಳೊಳಗೆ ನಿವೇಶನ ರಹಿತರ ಅಂತಿಮ ಪಟ್ಟಿ ಸಿದ್ಧಪಡಿಸಲಾಗುವುದು ಎಂಬುದಾಗಿ ಅಧಿಕಾರಿಗಳು ನೀಡಿದ ಭರವಸೆ ಮೇರೆಗೆ ಪ್ರತಿಭಟನೆಯನ್ನು ಹಿಂಪಡೆಯಲಾಯಿತು.

ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದರು. ಕೃಷಿ ಕೂಲಿಕಾರರ ಸಂಘದ ಮುಖಂಡರಾದ ಕವಿರಾಜ, ಪಿ. ವಿಶ್ವನಾಥ ರೈ, ಎಚ್. ವಿಠಲ ಪೂಜಾರಿ, ರಾಜೀವ ಪಡುಕೋಣೆ, ಮಾಧವ ಸಾಲಿಗ್ರಾಮ, ರಾಮ ಕಾರ್ಕಡ, ಉಮೇಶ ಕುಂದರ್, ನಳಿನಿ ಎಸ್. ಶಾರದ ಕಾರ್ಕಡ, ಉಪಸ್ಥಿತರಿದ್ದರು.
 

 

ವರದಿ : ವೆಂಕಟೇಶ ಕೋಣಿ