Error message

  • Deprecated function: Methods with the same name as their class will not be constructors in a future version of PHP; views_display has a deprecated constructor in require_once() (line 3097 of /home/janashakthi/public_html/includes/bootstrap.inc).
  • Deprecated function: Methods with the same name as their class will not be constructors in a future version of PHP; views_many_to_one_helper has a deprecated constructor in require_once() (line 113 of /home/janashakthi/public_html/sites/all/modules/ctools/ctools.module).

ಕಾರ್ಮಿಕ ಕಲ್ಯಾಣ ಸೆಸ್ ಗೆ ಜಿಎಸ್‍ಟಿ: ಉಡುಪಿಯಲ್ಲಿ ಪ್ರತಿಭಟನೆ

ಸಂಪುಟ: 
11
ಸಂಚಿಕೆ: 
44
date: 
Sunday, 22 October 2017

 

ಕೇಂದ್ರ ಸರ್ಕಾರ ಕಾರ್ಮಿಕ ಕಲ್ಯಾಣ ಸೆಸ್ಸನ್ನು ಸರಕು ಮತ್ತು ಸೇವಾ ತೆರಿಗೆ ವ್ಯಾಪ್ತಿಗೆ ಒಳಪಡಿಸುವುದನ್ನು ವಿರೋಧಿಸಿ, ಮರಳಿಗೆ ಏಕರೂಪದ ದರ ನಿಗದಿಪಡಿಸುವಂತೆ ಆಗ್ರಹಿಸಿ ಹಾಗೂ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಸಂಘಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಾರ್ಮಿಕರು ಅಕ್ಟೋಬರ್ 12 ರಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರ ಸಂಘದ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಜಿಲ್ಲಾ ಸಂಘದ ಮುಖಂಡರಾದ ದಾಸು ಭಂಡಾರಿ, ಶೇಖರ ಬಂಗೇರ, ದಯಾನಂದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬಂಟ್ವಾಳ: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಪ್ರತಿಭಟನೆಗಳ ಅಂಗವಾಗಿ ಫೆಡರೇಶನ್ನಿನ ಬಂಟ್ವಾಳ ತಾಲೂಕು ಸಮಿತಿ ಆಶ್ರಯದಲ್ಲಿ ಅಕ್ಟೋಬರ್ 16 ರಂದು ಬಿ.ಸಿ. ರೋಡಿನಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ಕರಾವಳಿಗೆ ಶಾಶ್ವತ ಮರಳು ನೀತಿಗಾಗಿ ಆಗ್ರಹಿಸಲಾಯಿತು.

ಪ್ರತಿಭಟನೆಗೆ ಮೊದಲು ಬಿ.ಸಿ. ರೋಡಿನ ನಾರಾಯಣ ಗುರು ವೃತ್ತದಿಂದ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಬಳಿಕ ನಡೆದ ಪ್ರತಿಭಟನಾ ಪ್ರದರ್ಶನವನ್ನುದ್ದೇಶಿಸಿ ಸಿಐಟಿಯು ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ತಾಲೂಕು ಸಮಿತಿ ಕಾರ್ಯದರ್ಶಿ ರಾಮಣ್ಣ ವಿಟ್ಲ, ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್ನಿನ ದ.ಕ.ಜಿಲ್ಲಾ ಉಪಾಧ್ಯಕ್ಷ ಕೆ.ಪಿ.ಜಾನ್ ಮಾತನಾಡಿದರು. ಉದಯ್ ಕುಮಾರ್ ಸ್ವಾಗತಿಸಿದರು.