Error message

  • Deprecated function: Methods with the same name as their class will not be constructors in a future version of PHP; views_display has a deprecated constructor in require_once() (line 3097 of /home/janashakthi/public_html/includes/bootstrap.inc).
  • Deprecated function: Methods with the same name as their class will not be constructors in a future version of PHP; views_many_to_one_helper has a deprecated constructor in require_once() (line 113 of /home/janashakthi/public_html/sites/all/modules/ctools/ctools.module).

ಬಿಸಿಯೂಟ ನೌಕರರ ವಜಾ: ಅಧಿಕಾರಿ ವಿರುದ್ಧ ಪ್ರತಿಭಟನೆ

ಸಂಪುಟ: 
11
ಸಂಚಿಕೆ: 
44
date: 
Sunday, 22 October 2017

ತಮ್ಮ ವ್ಯಾಪ್ತಿ ಮೀರಿ ಬಿಸಿಯೂಟ ನೌಕರರ ಮೇಲೆ ಯಾವುದೇ ವಿಚಾರಣೆ ನಡೆಸದೆ ಮತ್ತು ನೋಟೀಸ್ ನೀಡದೆ ಕೆಲಸದಿಂದ ವಜಾಗೊಳಿಸಲು ಗ್ರಾಮ ಪಂಚಾಯತ್ ಮತ್ತು ಶಾಲಾ ಅಭಿವೃದ್ಧಿ ಸಮಿತಿಗೆ ನಿರ್ದೇಶನ ನೀಡಿದ ಕಾರ್ಮಿಕ ವಿರೋಧಿ ಅಕ್ಷರ ದಾಸೋಹ ಅಧಿಕಾರಿಯನ್ನು ಅಮಾನತುಗೊಳಿಸಿ ತನಿಖೆ ಮಾಡಿ ಕಾನೂನು ಕ್ರಮ ಜರುಗಿಸಬೇಕೆಂದು ಅಕ್ಷರದಾಸೋಹ ನೌಕರರ ಸಂಘಟನೆಯ ವತಿಯಿಂದ ಆಗ್ರಹಿಸಲಾಯಿತು.

ಅಕ್ಟೋಬರ್ 16 ರಂದು ಮಂಗಳೂರು ಜಿಲ್ಲಾ ಪಂಚಾಯತ್ ಮುಂಭಾಗದಲ್ಲಿ ಅಕ್ಷರ ದಾಸೋಹ ನೌಕರರ ದ.ಕ.ಜಿಲ್ಲಾ ಸಮಿತಿ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಲಾಯಿತು. ಸಿಐಟಿಯು ದ.ಕ.ಜಿಲ್ಲಾ ಉಪಾಧ್ಯಕ್ಷ ವಸಂತಆಚಾರಿ, ರಾಜ್ಯ ಸಮಿತಿ ಸದಸ್ಯೆ ಜಯಂತಿ ಬಿ. ಶೆಟ್ಟಿ, ಅಕ್ಷರ ದಾಸೋಹ ನೌಕರರ ಜಿಲ್ಲಾ ಸಂಘದ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದರು. ಸಂಘದ ಮುಂದಾಳುಗಳಾದ ಗಿರಿಜ ಮೂಡಬಿದ್ರಿ, ರೇಖಲತಾ, ಭವ್ಯಾ, ಶಾಂತಾ, ಶ್ರೀಮತಿ ಪುತ್ತೂರು, ಅರುಣಾ ಕೈಕಂಭ, ಯಶೋಧಾ ಮೂಡಬಿದರೆ, ಶೋಭಾ ಮೂಡಬಿದ್ರಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

 

ಗ್ರಾಮ ಪಂಚಾಯತ್ ನೌಕರರ ಸಮಾವೇಶ: ಹೋರಾಟಕ್ಕೆ ಸಿದ್ಧತೆ

ಗ್ರಾಮ ಪಂಚಾಯತ್ ನೌಕರರಿಗೆ ವೇತನ ಪಾವತಿಗೆ ಸಂಬಂಧಿಸಿ ರಾಜ್ಯ ಸರಕಾರ ಈ ಸಾಲಿನಲ್ಲಿ ಇನ್ನೂ ಅನುದಾನ ಬಿಡುಗಡೆ ಮಾಡಿಲ್ಲ. ಇದರಿಂದಾಗಿ ಗ್ರಾಮ ಪಂಚಾಯತ್ ನೌಕರರು ಬವಣೆ ಅನುಭವಿಸುತ್ತಿದ್ದಾರೆ. ತಿಂಗಳ ಅಂತ್ಯದೊಳಗೆ ಅನುದಾನ ಬಿಡುಗಡೆ ಮಾಡದಿದ್ದಲ್ಲಿ, ರಾಜ್ಯಾದ್ಯಂತ ಮತ್ತೆ ಹೋರಾಟವನ್ನು ಆರಂಭಿಸಲಾಗುವುದು ಎಂಬುದಾಗಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ಎಚ್ಚರಿಸಿದರು.

ಅವರು ಮಂಗಳೂರಿನಲ್ಲಿ ಅಕ್ಟೋಬರ್ 14 ರಂದು ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆದ ದ.ಕ.ಜಿಲ್ಲಾ ಗ್ರಾಮ ಪಂಚಾಯತ್ ನೌಕರರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯತಿ ನೌಕರರ ಸಂಘದ ಜಿಲ್ಲಾ ಸಮಿತಿ ಅಧ್ಯಕ್ಷ ಯಾದವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಘು ಸುಬ್ರಮಣ್ಯ ಸಮಾವೇಶದಲ್ಲಿ ಭಾಗವಹಿಸಿದ್ದರು.

ಉದ್ಯೋಗ ಖಾತ್ರಿ ಅನುದಾನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ

ಉದ್ಯೋಗ ಖಾತ್ರಿ ಅನುದಾನವನ್ನು ಕೇಂದ್ರ ಸರಕಾರ ತೀವ್ರವಾಗಿ ಕಡಿತಗೊಳಿಸುತ್ತಿದ್ದು, ರಾಜ್ಯಕ್ಕೆ ಕೇವಲ ರೂ.2 ಸಾವಿರ ಕೋಟಿ ಮಾತ್ರ ಬಿಡುಗಡೆ ಮಾಡಿದ್ದರಿಂದ ಶೇ.25 ಉದ್ಯೋಗಾವಕಾಶಗಳು ಕಡಿಮೆಯಾಗಿವೆ. ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಬಾಕಿ ಇರುವ ರೂ.14,000 ಕೋಟಿ ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಕ್ಟೋಬರ್ 13ರಂದು ಕುಂದಾಪುರದಲ್ಲಿ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಕುಂದಾಪುರ ತಾಲೂಕು ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಂಘದ ತಾಲೂಕು ಕಾರ್ಯದರ್ಶಿ ಹಾಗೂ ನಾಡಾ ಗ್ರಾಮ ಪಂಚಾಯತ್ ಸದಸ್ಯೆ ನಾಗರತ್ನ ನಾಡ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಕೋಣಿ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಕಾರ್ಮಿಕ ಸಂಘದ ಮುಖಂಡರುಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.